ನವದೆಹಲಿ: ರಾಜಸ್ಥಾನದ ಚುರು-ಸಲಸರ್ ಹೆದ್ದಾರಿಯಲ್ಲಿ ಕಾರು ಹಿಂದಿನಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಿಕಾರ್’ನ ಫತೇಪುರದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು ಹೆದ್ದಾರಿಯಲ್ಲಿ ಟ್ರಕ್ಕಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರು ಮತ್ತು ಹತ್ತಿ ಸಾಗಿಸುತ್ತಿದ್ದ ಟ್ರಕ್ ಎರಡರಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಕಾರು ಪ್ರಯಾಣಿಕರೆಲ್ಲರೂ ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದು, ಸಲಾಸರ್ ಬಾಲಾಜಿ ದೇವಸ್ಥಾನದಿಂದ ಹಿಸಾರ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿ ಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚುರು-ಸಲಸರ್ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರು ಟ್ರಕ್’ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ, ಕಾರು ಮತ್ತು ಟ್ರಕ್ ಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ. ಸಿಕಾರ್ನ ಫತೇಪುರದಲ್ಲಿ ಭಾನುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ.