Sunday, 10th November 2024

ನಿಂತಿದ್ದ ಕಾರಿಗೆ ಟ್ರಕ್ ಡಿಕ್ಕಿ: ಸ್ಥಳದಲ್ಲೇ 10 ಮಂದಿ ಸಾವು

ಬೆಮೆತಾರಾ (ತ್ತೀಸ್​ಗಢ): ತ್ತೀಸ್​ಗಢ ಹೆದ್ದಾರಿಯಲ್ಲಿ ಟ್ರಕ್​ ಒಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಪ್ರಾಣಬಿಟ್ಟಿದ್ದಾರೆ.

ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಪಿಕಪ್​ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ. 23 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ರಾಯ್‌ಪುರ ಏಮ್ಸ್‌ಗೆ ದಾಖಲಿಸಲಾಗಿದೆ.

ಕುಟುಂಬದ ಕಾರ್ಯಕ್ರಮದ ನಿಮಿತ್ತ ಹಲವು ಮಂದಿ ಟ್ರಕ್​ನಲ್ಲಿ ಹೋಗುತ್ತಿದ್ದರು. ಇದು ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಮೃತರು ಪಥರಾ ಗ್ರಾಮದವರಾಗಿದ್ದು, ತಿರೈಯಾ ಗ್ರಾಮದಲ್ಲಿ ಕುಟುಂಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿ ದ್ದು, ಅವರನ್ನು ರಾಯ್‌ಪುರ ಏಮ್ಸ್‌ಗೆ ದಾಖಲಿಸಲಾಗಿದೆ.

ಛತ್ತೀಸ್‌ಗಢದ ಬೆಮೆತಾರಾ ಸಮೀಪದ ಕಥಿಯಾ ಗ್ರಾಮದ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಅಪಘಾತದ ನಂತರ ಸಾವನ್ನಪ್ಪಿದವರಲ್ಲಿ 5 ಮಹಿಳೆಯರು ಮತ್ತು 3 ಮಕ್ಕಳು ಸೇರಿದ್ದಾರೆ.