Tuesday, 15th October 2024

ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣ: ಸಹ ನಟ ಬಂಧನ

ಮುಂಬೈ: ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮ ವೊಂದರ ಸೆಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು ಬಂಧಿಸಲಾಗಿದೆ.

ಬಂಧಿತರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪವಿದೆ. ಸೋಮವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಮೃತ ನಟಿಯ ಮರಣೋತ್ತರ ಪರೀಕ್ಷೆಯನ್ನು ಭಾನುವಾರ ಮುಂಜಾನೆ ನೈಗಾಂವ್‌ನ ಜೆಜೆ ಆಸ್ಪತ್ರೆಯಲ್ಲಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

“ತುನಿಷಾ ಶರ್ಮಾ ಅವರ ಶವ ಪರೀಕ್ಷೆಯನ್ನು ಮುಂಜಾನೆ 4:30 ರವರೆಗೆ ನಡೆಸಲಾಯಿತು. ಈ ವೇಳೆ 4 ರಿಂದ 5 ಪೊಲೀಸ್ ಸಿಬ್ಬಂದಿ ಸಹ ಹಾಜರಿದ್ದರು” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ದೇಹವನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಲಾಗಿದೆ.

20 ವರ್ಷ ವಯಸ್ಸಿನ ಯುವ ನಟಿ ಶನಿವಾರ ಶೂಟಿಂಗ್ ವೇಳೆಯಲ್ಲಿ ಚಹಾ ವಿರಾಮದ ನಂತರ ವಾಶ್‌ರೂಮ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಎಷ್ಟೋ ಹೊತ್ತಾದರೂ ಶೌಚಾಲಯದಿಂದ ಆಕೆ ಹೊರಗೆ ಬರದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳಹೊಕ್ಕಬೇಕಾಯಿತು ಎಂದು ವಾಲೀವ್ ಪೊಲೀಸರು ತಿಳಿಸಿದ್ದಾರೆ. ಶೂಟಿಂಗ್ ಸಿಬ್ಬಂದಿ ಆಕೆಯನ್ನು ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

 
Read E-Paper click here