ಮುಂಬೈ: ಭಾರತ ಬಿಟ್ಟು ತೊಲಗಿ ಚಳುವಳಿ ಸ್ಮರಣಾರ್ಥ ಕ್ರಾಂತಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಹಾತ್ಮಾ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಅವರನ್ನು ಸಾಂತಾ ಕ್ರೂಸ್ ಪೊಲೀಸರು ಬುಧವಾರ ಬಂಧಿಸಿ ಬಿಡುಗಡೆ ಮಾಡಿದ್ದಾರೆ
ಈ ಕುರಿತು ತುಷಾರ್ ಗಾಂಧಿ ಅವರೇ ‘ಎಕ್ಸ್’ನಲ್ಲಿ (ಟ್ವಿಟರ್) ಮಾಹಿತಿ ಹಂಚಿಕೊಂಡಿದ್ದಾರೆ.
‘ಭಾರತ ಬಿಟ್ಟು ತೊಲಗಿ ಚಳುವಳಿ ಸ್ಮರಣಾರ್ಥ ಆಗಸ್ಟ್ 9ರಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟ್ಟಿದ್ದ ನನ್ನನ್ನು, ಸ್ವತಂತ್ರ ಭಾರತ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೊಲೀಸರು ಬಂಧಿಸಿದ್ದಾರೆ. ಐತಿಹಾಸಿಕ ದಿನದಂದು ನನ್ನ ಮುತ್ತಜ್ಜ-ಮುತ್ತಜ್ಜಿ, ಬಾಪು ಹಾಗೂ ಬಾ (ಮಹಾತ್ಮಾ ಗಾಂಧಿ ಮತ್ತು ಕಸ್ತೂರ ಬಾ) ಅವರೂ ಬ್ರಿಟೀಷರಿಂದ ಬಂಧನಕ್ಕೊಳಗಾಗಿದ್ದರು ಎಂಬ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಹೇಳಿದ್ದಾರೆ.