Thursday, 3rd October 2024

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರಿಗೆ ಕೋವಿಡ್-19 ಸೋಂಕು ದೃಢ

ನವದೆಹಲಿ: ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಭಾನುವಾರ ರಾತ್ರಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಅವರು ಪ್ರತ್ಯೇಕವಾಗಿದ್ದಾರೆ ಎಂದು ತಿಳಿಸಿದೆ. ‘ನಾನು ಶನಿವಾರದಿಂದ ಸೌಮ್ಯ ರೋಗ ಲಕ್ಷಣಗಳನ್ನು ಹೊಂದಿದ್ದರಿಂದ, ನಾನು ಶನಿವಾರದಿಂದಲೇ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಉಲ್ಲೇಖಿಸಿದ ಅವರು, ‘ಐತಿಹಾಸಿಕ ಪ್ರಮಾಣ ವಚನ ವನ್ನು ವೈಯಕ್ತಿಕವಾಗಿ ವೀಕ್ಷಿಸಲು ನನಗೆ ಸಾಧ್ಯವಾಗುವುದಿಲ್ಲ ಎಂದು ನನ್ನ ಬಗ್ಗೆ ನನಗೆ ವಿಷಾದವಿದೆ’ ಎಂದು ಹೇಳಿದರು.

ಸಾಲಿಸಿಟರ್ ಜನರಲ್ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಎರಡು-ಮೂರು ಸಣ್ಣ ವಿಷಯಗಳಲ್ಲಿ ವರ್ಚುವಲ್ ಆಗಿ ಹಾಜರಾಗ ಲಿದ್ದಾರೆ.