Saturday, 14th December 2024

ಅಬಕಾರಿ ನೀತಿ ಪ್ರಕರಣ: ಇಬ್ಬರ ಬಂಧನ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಆಮ್ ಆದ್ಮಿ ಪಕ್ಷದ ಸಂವಹನ ಉಸ್ತುವಾರಿ ವಿಜಯ್ ನಾಯರ್ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋನಪಲ್ಲಿ ಅವರನ್ನು ಬಂಧಿಸಿದೆ.

ಇಬ್ಬರನ್ನೂ ಭಾನುವಾರ ರಾತ್ರಿ ಕಸ್ಟಡಿಗೆ ತೆಗೆದುಕೊಂಡಿದೆ. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ನಾಯರ್ ಮತ್ತು ಅಭಿಷೇಕ್ ಬೋನಪಲ್ಲಿ ಅವರನ್ನು ಸಿಬಿಐ ಬಂಧಿಸಿತ್ತು. ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಎನ್ನಲಾಗಿದೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ಇಬ್ಬರು ಆರೋಪಿಗಳ ಜಾಮೀನು ಅರ್ಜಿ ಯನ್ನು ಸೋಮವಾರ ಸಂಜೆ 4 ಗಂಟೆಗೆ ವಿಚಾರಣೆ ನಡೆಸಬೇಕಿತ್ತು. ಆದರೆ, ಜಾಮೀನು ವಿಚಾರಣೆಗೆ ಮುನ್ನ ಇಡಿ ಅವರನ್ನು ಬಂಧಿಸಿತ್ತು.

ಪ್ರಸ್ತುತ ದೆಹಲಿ ಸಾರಾಯಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.