Monday, 14th October 2024

ಹೋಳಿ ಸಂಭ್ರಮಾಚರಣೆಯಲ್ಲಿ ಘರ್ಷಣೆ: ಇಬ್ಬರ ಹತ್ಯೆ, ಆರು ಮಂದಿಗೆ ಗಾಯ

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಬಳಿಯ ಹಳ್ಳಿಯಲ್ಲಿ ಶುಕ್ರವಾರ ಹೋಳಿ ಸಂಭ್ರಮಾಚರಣೆ ಕುರಿತ ವಿವಾದದಿಂದ ಘರ್ಷಣೆ ಉಂಟಾಗಿ ಇಬ್ಬರನ್ನು ಹತ್ಯೆ ಮಾಡಲಾಗಿ, ಸುಮಾರು ಆರು ಮಂದಿ ಗಾಯಗೊಂಡಿದ್ದಾರೆ.

ಜಾಮೊ ಪೊಲೀಸ್ ಠಾಣೆ ವ್ಯಾಪ್ತಿಯ ರೇವರಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಎಂದು ಠಾಣಾಧಿಕಾರಿ ಧಿರೇಂದ್ರ ಕುಮಾರ್ ಯಾದವ್ ಹೇಳಿದ್ದಾರೆ.

ಘರ್ಷಣೆ ನಂತರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಿಶ್ರಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.