ಬಂಡಿಪೋರಾ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಯೋಧರು ಇಬ್ಬರು ಉಗ್ರರನ್ನು ಹೊಡೆದು ರುಳಿಸಲಾಗಿದೆ ಎಂದು ತಿಳಿದುಬಂದಿದೆ.
ಕಾಶ್ಮೀರ ಪೊಲೀಸರು, ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿ ದ್ದಾರೆ ಎಂದು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಗಾಯಗೊಂಡಿರುವ ಮೂವರು ಸೈನಿಕರು 12 ಜಾಟ್ ರೆಜಿಮೆಂಟ್‌ಗೆ ಸೇರಿದವರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಕಾರ್ಯಾಚರಣೆ ಕುರಿತು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು, ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಓರ್ವ ಉಗ್ರ ಸ್ಥಳೀಯ ವಾಗಿ ತರಬೇತಿ ಪಡೆದವನಾಗಿದ್ದು, ಮತ್ತೊರ್ವ ಪಾಕಿಸ್ತಾನದಲ್ಲಿ ತರಬೇತಿ ಪಡೆದವನಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಉಗ್ರ ಬಿಜೆಪಿ ನಾಯಕ ವಾಸೀಮ್ ಬರಿ ಹತ್ಯೆ ಪ್ರಕರಣದಲ್ಲಿ ಭಾಗಿಯಾದವನಾಗಿದ್ದಾನೆಂದು ಹೇಳಿದ್ದಾರೆ.