Friday, 13th December 2024

ಪುಲ್ವಾಮಾ ಎನ್ಕೌಂಟರ್: ಇಬ್ಬರು ಭಯೋತ್ಪಾದಕರ ಹತ್ಯೆ

#PulwamaEncounter

ಪುಲ್ವಾಮಾ : ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆ ಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕ ರನ್ನು ಹತ್ಯೆ ಮಾಡಲಾಗಿದೆ.

ಪುಲ್ವಾಮಾದ ಕಸ್ಬಾ ಯಾರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ತಿಳಿದು ಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಸ್ಥಳ ದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.

ಸ್ಥಳದಲ್ಲಿ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸ್ಥಳ ವನ್ನು ಸುತ್ತುವರೆದ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿದ್ದಾರೆ. ಈ ಸಂದರ್ಭ ದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾ ಗಿದೆ ಎಂದು ತಿಳಿದು ಬಂದಿದೆ.

ಹತ್ಯೆಯಾದ ಇಬ್ಬರು ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಹತ್ಯೆಯಾದವರನ್ನು ಯಾಸಿರ್ ಪರ್ರೆ, ಫುರ್ಖಾನ್ ಎಂದು ಗುರುತಿಸಲಾಗಿದೆ. ಯಾಸಿರ್ ಪರ್ರೆ ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದು ಫುರ್ಖಾನ್ ಐಇಡಿ ತಜ್ಞ ಹಾಗೂ ವಿದೇಶಿ ಭಯೋತ್ಪಾದಕನಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.