Thursday, 12th December 2024

ಬಾಲಕಿ ಅತ್ಯಾಚಾರ: ಇಬ್ಬರು ಅಪ್ರಾಪ್ತರ ಬಂಧನ

ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್ ನಲ್ಲಿ ಬಾಲಕಿಯ (8 ವರ್ಷ) ಮೇಲೆ ಅತ್ಯಾಚಾರ ನಡೆದಿ ರುವ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಬಂಧಿಸಲಾಗಿದೆ.

ಸಂತ್ರಸ್ತೆಯ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸ್ ಅಧಿಕಾರಿ, ಆಕೆಯ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದು ಜನರಲ್ ವಾರ್ಡ್ ಗೆ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷ್ಯೆ ಸ್ವಾತಿ ಮಾಲಿವಾಲ್ ಅತ್ಯಾ ಚಾರಕ್ಕೊಳಗಾದ ಸಂತ್ರಸ್ತೆ ತೀವ್ರ ಗಾಯಗಳಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಳೆ ಎಂದು ಹೇಳಿದ್ದರು. ಅತ್ಯಾಚಾರವೆಸಗಿದ ಇಬ್ಬರೂ 10-12 ವಯಸ್ಸಿನವರಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಮಧ್ಯಾಹ್ನ ಬಾಲಕಿ ಮನೆಯ ಮುಂಭಾಗ ಆಟವಾಡುತ್ತಿದ್ದಳು. ಅದೇ ಪ್ರದೇಶದಲ್ಲಿದ್ದ ಬಾಲಕನೋರ್ವ ಆಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಆತನ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಸಂಜೆ ಮನೆಗೆ ಬಂದಿದ್ದು ಘಟನೆಯನ್ನು ಪೋಷಕರಿಗೆ ವಿವರಿಸಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅತ್ಯಾಚಾರವೆಸಗಿದವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಓರ್ವ ಆರೋಪಿಗೆ ತಂದೆ ಇಲ್ಲ, ಆತನ ತಾಯಿ ಬಿಹಾರದಲ್ಲಿದ್ದು, ದೆಹಲಿಯಲ್ಲಿ ಆತನ ಸಂಬಂಧಿಕರ ಮನೆಯಲ್ಲಿ ವಾಸವಿದ್ದಾನೆ.