ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ದಾಳಿಯಲ್ಲಿ ಪೊಲೀಸ್ ಮಾಹಿತಿದಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ನಕ್ಸಲರ ಗುಂಪು ಇಬ್ಬರು ಗ್ರಾಮಸ್ಥರನ್ನು ಹತ್ಯೆ ಮಾಡಿದ್ದಾರೆ.
ಬಲಿಯಾದವರಲ್ಲಿ ಒಬ್ಬರು ಕೇಡರ್, ‘ಗ್ರಾಮಸ್ಥರನ್ನು ಗುರುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಿರಬಹುದು’ ಎಂದು ಪೊಲೀಸರು ಹೇಳಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ 25 ಉಗ್ರರೊಂದಿಗೆ ಮಾವೋವಾದಿ ನಾಯಕ ಮಿಲಿಂದ್ ತೇಲ್ತುಂಬ್ಡೆ ಹತ್ಯೆಯಾದ ಎನ್ಕೌಂಟರ್ ನಂತರ ಕಳೆದ ಐದು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ ಮೊದಲ ನಕ್ಸಲ್-ಸಂಬಂಧಿತ ಘಟನೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.