ತಿರುವನಂತಪುರ: ಕೇರಳದಲ್ಲಿ ಮಹಿಳೆ ಸೇರಿದಂತೆ ಇಬ್ಬರಿಗೆ ಝಿಕಾ ವೈರಸ್ ಸೋಂಕು ತಗಲಿರುವುದು ಮಂಗಳವಾರ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 21ಕ್ಕೆ ಏರಿದೆ.
‘ಪುಂಥುರಾದ 35 ವರ್ಷದ ಪುರುಷ ಹಾಗೂ ಸಷ್ಟಮಂಗಲಂನ 41 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜನರು ಎಚ್ಚರಿಕೆ ವಹಿಸಬೇಕು’ ಎಂದು ಆರೋಗ್ಯ ಸಚಿವೆ ವೀಣಾಹೇಳಿದ್ದಾರೆ.
ಸೋಮವಾರ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಝಿಕಾ ವೈರಸ್ ಪರೀಕ್ಷಾ ಕಾರ್ಯ ಆರಂಭಿಸಲಾಗಿದೆ. ಇದರಲ್ಲಿ ಒಟ್ಟು 15 ಜನರ ಮಾದರಿಗಳನ್ನು ಪರೀಕ್ಷಿಸ ಲಾಗಿದೆ. ಈ ಪೈಕಿ ಒಬ್ಬ ವ್ಯಕ್ತಿಗೆ ಡೆಂಗಿ ಇರುವುದು ಪತ್ತೆಯಾಗಿದೆಎಂದು ವೀಣಾ ಅವರು ಮಾಹಿತಿ ನೀಡಿದ್ದಾರೆ.