Thursday, 12th December 2024

ದೌರ್ಜನ್ಯ: ಶ್ರೀಕಾಂತ್ ತ್ಯಾಗಿ ಬಂಧನ

ಮೀರತ್‌: ನಗರದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನೋಯ್ಡಾ ಮೂಲದ ರಾಜಕಾರಣಿ ಶ್ರೀಕಾಂತ್ ತ್ಯಾಗಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಶ್ರೀಕಾಂತ್ ತ್ಯಾಗಿಯನ್ನು ಮೀರತ್‌ನಲ್ಲಿ ಬಂಧಿಸಲಾಗಿದ್ದು, ಅವರನ್ನು ನೋಯ್ಡಾಗೆ ಹಿಂತಿರುಗಿಸಲಾಗುತ್ತಿದೆ ಎಂದು ವರದಿಯಾಗಿದೆ.

ತ್ಯಾಗಿ ನೋಯ್ಡಾದ ಸೆಕ್ಟರ್ 93 ರ ಗ್ರಾಂಡ್ ಒಮ್ಯಾಕ್ಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ನಿಂದನೆ ಮಾಡುತ್ತಿರುವುದು ವೈರಲ್ ಆಗಿರುವ ವೀಡಿಯೊದಲ್ಲಿ ಕಂಡುಬಂದಿದೆ. ಅಂದಿನಿಂದ ತ್ಯಾಗಿ ತಲೆಮರೆಸಿಕೊಂಡಿದ್ದರು.

ತಾನು ಭಾರತೀಯ ಜನತಾ ಪಕ್ಷದೊಂದಿಗೆ ಸಂಬಂಧ ಹೊಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.