Sunday, 13th October 2024

ಮುಂಗಾರು ಅಧಿವೇಶನದಲ್ಲಿ ‘ಏಕರೂಪ ನಾಗರಿಕ ಸಂಹಿತೆ’ ಮಂಡನೆ

ನವದೆಹಲಿ:  ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಮುಂದಿನ ತಿಂಗಳು ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

Read E-Paper click here

ಮುಂದಿನ ವರ್ಷ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಅದಕ್ಕೂ ಮುನ್ನ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅಂಗೀಕರಿಸುವ ಮೂಲಕ ದೇಶದ ಜನರ ವಿಶ್ವಾಸ ಗಳಿಸುವ ಪ್ರಯತ್ನದಲ್ಲಿ ಬಿಜೆಪಿ ಇದ್ದು, ಆದರೆ ಬಹುತೇಕ ಪ್ರತಿಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ.

ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು, ಏಕರೂಪ ನಾಗರಿಕ ಸಂಹಿತೆ ಮಹತ್ವದ ಕುರಿತು ಬಹಿರಂಗವಾಗಿಯೇ ಪ್ರತಿಪಾದಿಸಿದ್ದು, ಇದು ಜಾರಿಗೆ ಬಂದರೆ ಸುಗಮ ಆಡಳಿತ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಇನ್ನು ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ ಜೂ.14ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕರಿಂದ ಅಭಿಪ್ರಾಯ ಕೇಳಲಾಗಿದೆ.