ಬೆಂಗಳೂರು: ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (United Commercial Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 68 ಸ್ಪೆಷಲಿಸ್ಟ್ ಆಫೀಸರ್ (Specialist Officers) ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ (UCO Bank Recruitment 2025). ಎಕನಾಮಿಸ್ಟ್, ಫೈರ್ ಸೇಫ್ಟಿ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ 2025ರ ಜ. 20 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಎಕನಾಮಿಸ್ಟ್ – 2 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಫೈರ್ ಸೇಫ್ಟಿ ಆಫೀಸರ್ – 2 ಹುದ್ದೆ, ವಿದ್ಯಾರ್ಹತೆ: ಪದವಿ
ಸೆಕ್ಯುರಿಟಿ ಆಫೀಸರ್ – 8 ಹುದ್ದೆ, ವಿದ್ಯಾರ್ಹತೆ: ಪದವಿ
ರಿಸ್ಕ್ ಆಫೀಸರ್ – 10 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಎಂಬಿಎ, ಪಿಜಿಡಿಎಂ
ಐಟಿ ಆಫೀಸರ್ – 21 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್, ಎಂಸಿಎ, ಎಂ.ಎಸ್‌ಸಿ
ಚಾರ್ಟೆಡ್ ಅಕೌಂಟೆಂಟ್ – 25 ಹುದ್ದೆ, ವಿದ್ಯಾರ್ಹತೆ: ಸಿಎ
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 21 ವರ್ಷದಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 100 ರೂ., ಇತರ ಎಲ್ಲ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ
ಆನ್‌ಲೈನ್ ಲಿಖಿತ ಪರೀಕ್ಷೆ, ಸ್ಕ್ರೀನಿಂಗ್ ಮತ್ತು ಸಂದರ್ಶನದ (Online Written Examination, Screening & Interview) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ 48,480 ರೂ. – 93,960 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
UCO Bank Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://onlineappl.ucoonline.in/Recurit_Agen/home.jsp) - ಹೆಸರು ನೋಂದಾಯಿಸಿ.
- ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ವಿಳಾಸ: ucobank.comಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: BOB Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿದೆ 1,267 ಹುದ್ದೆ; ಪದವಿ ವಿದ್ಯಾರ್ಹತೆ ಹೊಂದಿದ್ದರೆ ಈಗಲೇ ಅಪ್ಲೈ ಮಾಡಿ