Thursday, 12th December 2024

ಆಧಾರ್-ಪಡಿತರ ಚೀಟಿ ಲಿಂಕ್: ಸೆಪ್ಟೆಂಬರ್ 30 ಗಡುವು

ನವದೆಹಲಿ: ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ.

ಸೆಪ್ಟೆಂಬರ್ 30 ರೊಳಗೆ ಲಿಂಕ್ ಮಾಡ ಬೇಕು. ಲಿಂಕ್ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಲು ಕೊನೆಯ ದಿನಾಂಕ 30 ಜೂನ್ 2023 ಆಗಿತ್ತು.

ಸೆಪ್ಟೆಂಬರ್ 30 ರ ನಂತರ ತಮ್ಮ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಲು ಯಾರಿಗೂ ಅನುಮತಿಸಲಾಗುವುದಿಲ್ಲ. ತಮ್ಮ ದಾಖಲೆಗಳನ್ನು ಲಿಂಕ್ ಮಾಡದ ಜನರು ಹಂತಗಳನ್ನು ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರದ ಮೂಲಗಳು ಸೂಚನೆ ನೀಡಿದೆ.

ಯುಐಡಿಎಐನ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್ಸೈಟ್ ಮೂಲಕವೂ ಜೋಡಣೆ ಮಾಡಬಹುದು. ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು.

ಲಿಂಕ್ ಮಾಡುವುದು ಹೇಗೆ..?
ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
• ನಿಮ್ಮ ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ ಅಧಿಕೃತ ವೆಬ್ಸೈಟ್ ಗೆ ಹೋಗಿ.
• ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
• ‘ಮುಂದುವರಿಯಿರಿ’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರುತ್ತದೆ.
• ಒಟಿಪಿ ನಮೂದಿಸಿ ಮತ್ತು ಪಡಿತರ ಚೀಟಿ ಆಧಾರ್ ಕಾರ್ಡ್ ಲಿಂಕ್ ಕ್ಲಿಕ್ ಮಾಡಿ