Sunday, 15th December 2024

ಕೇಂದ್ರ ಸಚಿವ ಜಾವ್ಡೇಕರ್’ಗೂ ಕರೋನಾ ಪಾಸಿಟಿವ್

ನವದೆಹಲಿ : ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ನನ್ನ ಸಂಪರ್ಕದಲ್ಲಿದ್ದವರಿಗೆ ಕರೋನಾ ಸೋಂಕಿನ ಲಕ್ಷಣಗಳಿದ್ದರೇ, ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,17,53 ಮಂದಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿನ ಸಂಖ್ಯೆ 14,291,917ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಸೋಂಕಿಗೆ ಒಟ್ಟು 1,185 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,74,308 ಕ್ಕೆ ಏರಿದೆ.

ಮಹಾರಾಷ್ಟ್ರ, ಛತ್ತೀಸ್ ಗಢ, ಉತ್ತರ ಪ್ರದೇಶ, ಕರ್ನಾಟಕ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ರಾಜಸ್ಥಾನ, ಪಂಜಾಬ್, ಕೇರಳ, ತೆಲಂಗಾಣ, ಉತ್ತರಾಖಂಡ್, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಒಂದೇ ದಿನದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.