ಹುಬ್ಬಳ್ಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಅವರಿಗೆ ಷರತ್ತು ಬದ್ಧ ಜಾಮೀನು (Bail) ಸಿಕ್ಕಿದೆ. ಆದರೆ, ನ್ಯಾಯಾಲಯ (Court) ಅವರನ್ನು ಇನ್ನೂ ಆರೋಪಮುಕ್ತ ಮಾಡಿಲ್ಲ. ಬಿಜೆಪಿಗೆ ನ್ಯಾಯಾಂಗದ ಮೇಲೆ ನಂಬಿಕೆಯಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಅರವಿಂದ ಕೇಜ್ರಿವಾಲ್ ಜಾಮೀನು ಕುರಿತು ಅವರು ಪ್ರತಿಕ್ರಿಯಿಸಿದರು.
ಈ ಸುದ್ದಿಯನ್ನೂ ಓದಿ | Pralhad Joshi: ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡಲಿ : ಪ್ರಲ್ಹಾದ್ ಜೋಶಿ
ನ್ಯಾಯಾಂಗ ವ್ಯವಸ್ಥೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ನ್ಯಾಯಾಲಯ ಅವರನ್ನು ಇನ್ನೂ ಆರೋಪಮುಕ್ತ ಮಾಡಿಲ್ಲ. ಬಿಜೆಪಿಗೆ ನ್ಯಾಯಾಂಗದ ಮೇಲೆ ನಂಬಿಕೆಯಿದೆ ಎಂದು ತಿಳಿಸಿದ ಜೋಶಿ ಅವರು, ಹಿಂದೆ ಲಾಲೂ ಪ್ರಸಾದ ಯಾದವ್ ಅವರಿಗೂ ಬೇಲ್ ಸಿಕ್ಕಿತ್ತು. ಸಮಗ್ರ ವಿಚಾರಣೆ ಬಳಿಕ ಆರೋಪ ಸಾಬೀತಾಗಿ ಶಿಕ್ಷೆಗೆ ಒಳಗಾದರು ಎಂದು ಅವರು ವಿಶ್ಲೇಷಿಸಿದರು.
ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಗೆ ನಿದರ್ಶನ
ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಅತ್ಯುನ್ನತವಾಗಿದೆ ಮತ್ತು ಅತ್ಯಂತ ಶ್ರೇಷ್ಠವಾಗಿದೆ ಎಂಬುದಕ್ಕೆ ಇದು ನಿದರ್ಶನ ಎಂದು ಸಚಿವ ಪ್ರಲ್ಹಾದ್ ಜೋಶಿ ವ್ಯಾಖ್ಯಾನಿಸಿದರು.
ಈ ಸುದ್ದಿಯನ್ನೂ ಓದಿ | Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ!
ದೇಶದಲ್ಲಿ ಕೋರ್ಟ್‌ಗಳು ನ್ಯಾಯಯುತವಾಗಿ, ಅತ್ಯಂತ ನಿಸ್ಪಕ್ಷಪಾತವಾಗಿ ಕೆಲಸ ಮಾಡುತ್ತಿವೆ ಎಂದ ಸಚಿವರು, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅರಿಯಲಿ ಎಂದು ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.