Sunday, 15th December 2024

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ.

ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, ಅಧಿವೇಶನದ ಪೂರ್ವಾರ್ಧ ಫೆಬ್ರವರಿ 10ರ ವರೆಗೆ ನಡೆಯಲಿದೆ.

ಬಜೆಟ್ ಅಧಿವೇಶನ ಏಪ್ರಿಲ್ 6ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗಿದೆ. ಈ ವರ್ಷ ಕರ್ನಾಟಕವೂ ಸೇರಿದಂತೆ ಕೆಲ ವೊಂದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಕಾರಣ ಹಲವು ಕೊಡುಗೆಗಳನ್ನು ಘೋಷಿಸುವ ಸಾಧ್ಯತೆ ಇದೆ.