Saturday, 14th December 2024

ಲೇಹ್ ನಲ್ಲಿ ಕೇಂದ್ರ ವಿಶ್ವವಿದ್ಯಾಲಯ: ಲಡಾಖ್ ವಿದ್ಯಾರ್ಥಿಗಳ ಕನಸು ನನಸು

ನವದೆಹಲಿ: ಕೇಂದ್ರ ಸರ್ಕಾರ ಇದೀಗ ಲಡಾಖ್ ನ ಲೇಹ್ ನಲ್ಲಿ ಕೇಂದ್ರ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದೆ.

ಸಂಸತ್ ನಲ್ಲಿ ಕೇಂದ್ರ ಆಯವ್ಯಯ 2021ನ್ನು ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ಲಡಾಖ್ ನಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಘೋಷಣೆ ಮಾಡಿದರು. ಲಡಾಖ್ ನಲ್ಲಿ ಉನ್ನತ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆ ಇದೆ. ಲೇಹ್ ನಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಹೇಳಿದರು. ಇದು ದೇಶದ 55ನೇ ಕೇಂದ್ರೀಯ ವಿಶ್ವವಿದ್ಯಾ ಲಯವಾಗಲಿದೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನಲ್ಲಿ ಉನ್ನತ ಶಿಕ್ಷಣ ಎಲ್ಲ ವಿದ್ಯಾರ್ಥಿಗಳಿಗೂ ಲಭ್ಯವಾಗಬೇಕು. ಎನ್‌ಜಿಒಗಳು, ಖಾಸಗಿ ಶಾಲೆಗಳು ಮತ್ತು ರಾಜ್ಯಗಳ ಸಹಭಾಗಿತ್ವದಲ್ಲಿ 100 ಹೊಸ ಸೈನಿಕ್ ಶಾಲೆಗಳನ್ನು ಸ್ಥಾಪಿಸಲಾಗುವುದು.

ಉನ್ನತ ಶಿಕ್ಷಣಕ್ಕಾಗಿ ಪ್ರಧಾನಿ ಸಮಿತಿ ರಚನೆಗಳನ್ನು ರಚಿಸಬೇಕಾಗಿದೆ. ಎನ್‌ಇಪಿ 2020 ರ ಅಡಿಯಲ್ಲಿ 15,000 ಕ್ಕೂ ಹೆಚ್ಚು ಶಾಲೆಗಳನ್ನು ಬಲಪಡಿಸಲಾಗುವುದು ಎಂದು ಹೇಳಿದರು. ಇದೀಗ ಲಡಾಖ್ ವಿದ್ಯಾರ್ಥಿಗಳ ಕನಸು ನನಸಾಗಿದೆ.