Wednesday, 11th December 2024

ಶ್ರೀನಗರದಲ್ಲಿ ಮಾನವ ರಹಿತ ವೈಮಾನಿಕ ವಾಹನಗಳಿಗೆ ನಿರ್ಬಂಧ

ಶ್ರೀನಗರ: ಡ್ರೋಣ್ ಗಳು ಮತ್ತು ಇದೇ ರೀತಿಯ ಮಾನವ ರಹಿತ ವೈಮಾನಿಕ ವಾಹನಗಳಿಗೆ ಶ್ರೀನಗರ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ. ಡ್ರೋಣ್ ಬಳಸಿ ಜಮ್ಮು ವಾಯುನೆಲೆ ಮೇಲೆ ದಾಳಿಯಾದ ನಂತರ ಈ ಬೆಳವಣಿಗೆ ನಡೆದಿದೆ.

ಜಿಲ್ಲಾ ವ್ಯಾಪ್ತಿಯೊಳಗೆ ಡ್ರೋಣ್ ಗಳಂತಹ ಮಾನವ ರಹಿತ ವಾಹನಗಳ ಬಳಕೆ, ಹಾರಾಟ, ಸಂಗ್ರಹ, ಮಾರಾಟವನ್ನು ನಿಷೇಧಿಸಿ ಶ್ರೀನಗರ ಜಿಲ್ಲಾಧಿಕಾರಿ ಅಜಾಜ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮಾನವರಹಿತ ವೈಮಾನಿಕ ವಾಹನಗಳನ್ನು ಹೊಂದಿರುವ ವ್ಯಕ್ತಿಗಳು ಸರಿಯಾದ ರಶೀದಿಯಡಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇಡಬೇಕೆಂದು ಆದೇಶಿಸಲಾಗಿದೆ ಎಂದು ಅಜಾಜ್ ಆದೇಶದಲ್ಲಿ ತಿಳಿಸಿದ್ದಾರೆ.

ಕೃಷಿ, ಪರಿಸರ ಸಂರಕ್ಷಣೆ ಮತ್ತು ವಿಪತ್ತು ತಗ್ಗಿಸುವಿಕೆ ಕ್ಷೇತ್ರಗಳಲ್ಲಿ ಮ್ಯಾಪಿಂಗ್, ಸಮೀಕ್ಷೆಗಳು ಮತ್ತು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಬಳಸುವ ಸರ್ಕಾರಿ ಇಲಾಖೆಗಳು ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವ ಮೊದಲು ಸ್ಥಳೀಯ ಪೊಲೀಸರಿಗೆ ತಿಳಿಸಬೇಕಾಗುತ್ತದೆ ಆದೇಶದಲ್ಲಿ ಹೇಳಲಾಗಿದೆ.