ಲಕ್ನೋ: ವಿದ್ಯುತ್ ಬಿಲ್‌ಗಳ ಮೂಲಕ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಲೂಟಿ ಹೊಡೆ ಯುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಈ ಸಮಸ್ಯೆಗೆ ಅಂತ್ಯ ಹಾಡಲಾಗು ವುದು ಎಂದು ಆಶ್ವಾಸನೆ ನೀಡಿದ್ದಾರೆ.
ರಾಜ್ಯದ ವಿದ್ಯುತ್ ಇಲಾಖೆಯು ಒಬ್ಬ ಕಾರ್ಮಿಕನಿಗೆ 19,19,09,993 ರೂಪಾಯಿ ಬಿಲ್ ನೋಟಿಸ್ ನೀಡಿದೆ ಎಂದು ಹೇಳಲಾದ ವರದಿಯೊಂದನ್ನು ಟ್ವೀಟ್ ಮಾಡಿದ್ದಾರೆ.
“ಬಿಜೆಪಿ ಆಡಳಿತದಲ್ಲಿ ವಿದ್ಯುತ್ ಬಿಲ್ ಮತ್ತು ಸ್ಮಾರ್ಟ್ ಮೀಟರ್ ಲೂಟಿ ಯಿಂದಾಗಿ ರಾಜ್ಯದ ಸಾಮಾನ್ಯ ಜನರು ತತ್ತರಿಸು ತ್ತಿದ್ದಾರೆ. ಜೀವನೋಪಾಯ ಕ್ಕಾಗಿ ಕಷ್ಟಪಟ್ಟು ದುಡಿಯುವ ಕುಟುಂಬಕ್ಕೆ ₹19 ಕೋಟಿ 19 ಲಕ್ಷ ವಿದ್ಯುತ್ ಬಿಲ್ ಪಾವತಿಸುವಂತೆ ವಿದ್ಯುಚ್ಛಕ್ತಿ ಇಲಾಖೆ ನೋಟಿಸ್ ನೀಡಿದೆ,” ಎಂದು ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಮೊದಲ ಆದ್ಯತೆ ನೀಡುತ್ತದೆ. ರಾಜ್ಯದಲ್ಲಿ ಶೇ.40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ.
ಕಾಂಗ್ರೆಸ್ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಹಾಗೂ ಹೊಸ ಕಾರ್ಯಕರ್ತರ ಸೇರ್ಪಡೆ ಮಾಡಿಕೊಳ್ಳುವುದಕ್ಕಾಗಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರತಿಜ್ಞಾ ಯಾತ್ರೆ ನಡೆಸುತ್ತಿದೆ. ಅಕ್ಟೋಬರ್ 23ರಂದು ಆರಂಭವಾಗಿರುವ ಪ್ರತಿಜ್ಞಾ ಯಾತ್ರೆಯು ನವೆಂಬರ್ 1ರವರೆಗೂ ರಾಜ್ಯದ ಮೂರು ಮಾರ್ಗಗಳಲ್ಲಿ ಸಂಚರಿಸಲಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ರೈತರ ಕೃಷಿ ಸಾಲ ಮನ್ನಾ ಮಾಡಲಾಗುವುದು, 20 ಲಕ್ಷ ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗ ನೀಡುವುದು, ಸಾಂಕ್ರಾಮಿಕ ಸಮಯದಲ್ಲಿನ ವಿದ್ಯುತ್ ಬಿಲ್ ಮನ್ನಾ ಮಾಡುವುದು ಮತ್ತು ಕೋವಿಡ್ -19 ಸಂತ್ರಸ್ತರಿಗೆ ರೂ 25,000 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.