Wednesday, 11th December 2024

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ರಾಜ್ಯಸಭಾ ಕಲಾಪ ಮುಂದೂಡಿಕೆ

ನವದೆಹಲಿ: ರಾಜ್ಯಸಭಾ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದವು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿ ನಡೆಯುತ್ತಿರುವ ವೇಳೆ ಹಲವು ವಿರೋಧ ಪಕ್ಷಗಳು ಕೃಷಿ ಕಾಯ್ದೆಯ ವಿರುದ್ಧ ಘೋಷಣೆ ಗಳನ್ನು ಕೂಗಿದವು. ಕಾಯ್ದೆಯ ಬಗ್ಗೆ ರೈತರ ಜತೆ ಚರ್ಚಿಸಬೇಕು ಎಂದು ಒತ್ತಾಯಿಸಿದವು.

ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಕಲಾಪವನ್ನು ಮುಂದೂಡಿದರು.