ನವದೆಹಲಿ: ಕೊರೋನಾ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾ ಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ಈ ಕುರಿತು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಿದರು. ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಗಳಾದ ಬಿ ಆರ್ ಗವಾಯಿ ಮತ್ತು ಕೃಷ್ಣ ಮುರೈ ಅವರೂ ಇದ್ದಾರೆ.
2020ರ ಯುಪಿಎಸ್ಸಿ ಪರೀಕ್ಷೆ ತಪ್ಪಿಸಿಕೊಂಡ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಸಿದ್ಧವಿಲ್ಲ. ಈ ವಿಚಾರಕ್ಕೆ ಸಂಬಂಧಿಸದಿಂತೆ ಪ್ರಮಾಣ ಪತ್ರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು’ ಎಂದು ರಾಜು ಅವರು ಪೀಠಕ್ಕೆ ಮನವಿ ಮಾಡಿದರು.
ಪರೀಕ್ಷೆಗೆ ಮತ್ತೊಂದು ಅವಕಾಶ ನೀಡುವಂತೆ ಕೋರಿ ನಾಗರಿಕ ಸೇವೆಗಳ ಆಕಾಂಕ್ಷಿ ರಚನಾ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಜ.25ಕ್ಕೆ ಮುಂದೂಡಿದೆ.