Thursday, 19th September 2024

UPSC Recruitment 2024: ವಿವಿಧ ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

UPSC Recruitment 2024

ಬೆಂಗಳೂರು: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (Union Public Service Commission) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಹೈಡ್ರೋಜಿಯಾಲಜಿಸ್ಟ್‌, ಜಿಯಾಲಜಿಸ್ಟ್‌ (ಭೂ ವಿಜ್ಞಾನಿ) ಸೇರಿ 85 ಹುದ್ದೆಗಳು ಖಾಲಿ ಇವೆ (UPSC Recruitment 2024). ಸ್ನಾತಕೋತ್ತರ ಪದವಿ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 24 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜಿಯಾಲಜಿಸ್ಟ್‌ – 16 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಭೂಭೌತಶಾಸ್ತ್ರಜ್ಞ (Geophysicist) – 6 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಕೆಮಿಸ್ಟ್‌ – 2 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಸೈಂಟಿಸ್ಟ್ ಬಿ (ಹೈಡ್ರೋಜಿಯಾಲಜಿ) – 13 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಸೈಂಟಿಸ್ಟ್ ಬಿ (ಕೆಮಿಕಲ್) – 1 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಸೈಂಟಿಸ್ಟ್ ಬಿ (ಜಿಯೋಫಿಸಿಕ್ಸ್) – 1 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಅಸಿಸ್ಟಂಟ್‌ ಹೈಡ್ರೋಜಿಯಾಲಜಿಸ್ಟ್ – 31 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಅಸಿಸ್ಟಂಟ್‌ ಕೆಮಿಸ್ಟ್‌ – 4 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಅಸಿಸ್ಟಂಟ್‌ ಜಿಯೋಫಿಸಿಸ್ಟ್‌- 11 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು.

ಆಯ್ಕೆ ವಿಧಾನ

ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ, ಪರ್ಸನಾಲಿಟಿ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://upsconline.nic.in/upsc/OTRP/index.php)
  • ಇಮೇಲ್‌ ಐಡಿ ಅಥವಾ ಫೋನ್‌ ನಂಬರ್‌ ನಮೂದಿಸಿ ಪಾಸ್‌ವರ್ಡ್‌ ತಯಾರಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ವೈಯಕ್ತಿಕ ಮಾಹಿತಿ ಜೊತೆಗೆ ಶೈಕ್ಷಣಿಕ ವಿವರಗಳನ್ನು ನಮೂದಿಸಿ.
  • ಅಗತ್ಯ ದಾಖಲೆ, ಫೋಟೋಗಳನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ರಿಕ್ವೆಸ್ಟ್‌ ನಂಬರ್‌ ಅಥವಾ ಅಪ್ಲಿಕೇಷನ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ, ಸಂಶಯ ನಿವಾರಣೆಗೆ ದೂರವಾಣಿ ಸಂಖ್ಯೆ: 011-23385271/011-23381125/011-23098543ಕ್ಕೆ ಕರೆ ಮಾಡಿ. ಅಧಿಕೃತ ವೆಬ್‌ಸೈಟ್‌: upsc.gov.inಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: Railway Jobs: ಕೊಂಕಣ ರೈಲ್ವೆಯಲ್ಲಿ ಕರ್ನಾಟಕದವರಿಗೆ 190 ಉದ್ಯೋಗ, ಸರ್ಜಿ ಸಲ್ಲಿಸುವುದು ಹೀಗೆ