Friday, 22nd November 2024

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯಾಗಲಿ: ಪ್ರಧಾನಿ ಮೋದಿ

ನವದೆಹಲಿ: ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ನ್ಯಾಯ ವ್ಯವಸ್ಥೆಯ ಮೇಲೆ ಜನಸಾಮಾನ್ಯರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ ಮುಖ್ಯನ್ಯಾಯ ಮೂರ್ತಿಗಳ ಜಂಟಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು, ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕಾಗಿದೆ. ಇದು ನ್ಯಾಯ ವ್ಯವಸ್ಥೆ ಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಸುಗಮ ಸಂಪರ್ಕಕ್ಕೆ ಸಹಾಯವಾಗಲಿದೆ.

ನ್ಯಾಯ ವಿತರಣೆ ಸುಲಭಗೊಳಿಸಲು ಹಳತಾದ ಕಾನೂನುಗಳನ್ನು ರದ್ದುಗೊಳಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು. ಅವುಗಳಲ್ಲಿ 1,450 ಕಾನೂನುಗಳನ್ನು ರದ್ದುಗೊಳಿಸಲಾಗಿದೆ. 75 ಕಾನೂನುಗಳನ್ನು ರಾಜ್ಯ ಸರ್ಕಾರಗಳು ರದ್ದುಪಡಿಸಿವೆ ಎಂದು ಹೇಳಿದರು.

ಭಾರತದಲ್ಲಿ ನ್ಯಾಯಾಂಗ ಸಂವಿಧಾನ ರಕ್ಷಕನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸು ತ್ತಿದ್ದು, ಶಾಸಕಾಂಗ ನಾಗರಿಕರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಇವೆರಡರ ಪರಿಣಾ ಮಕಾರಿ ಸಂಗಮದಿಂದ ಕಾಲಮಿತಿಯ ನ್ಯಾಯಾಂಗ ವ್ಯವಸ್ಥೆ ಸಾಧ್ಯ ವಾಗಲಿದೆ ಎಂದರು.

ಸುಪ್ರೀಂಕೋರ್ಟ್‍ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ಸಂವಿಧಾನ ಮೂರು ಅಂಗಗಳ ನಡುವೆ ಅಧಿಕಾರವನ್ನು ಪ್ರತ್ಯೇಕ ಗೊಳಿಸಿ ಸ್ಪಷ್ಟತೆ ನೀಡಿದೆ. ಪ್ರತಿಯೊಂದು ಅಂಗವೂ ಕರ್ತವ್ಯ ನಿರ್ವಹಿಸುವಾಗ ಲಕ್ಷ್ಮಣ ರೇಖೆಯನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದರು.