Thursday, 12th December 2024

ಅ.20ರಿಂದ ಪ್ರಧಾನಿ ಮೋದಿ ಉತ್ತರಪ್ರದೇಶ ಪ್ರವಾಸ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಿಮಿತ್ತ ಅ.20 ಮತು 25ರಂದು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಅ.20ರಂದು ಕುಶಿನಗರದಲ್ಲಿ ನಡೆಯುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡ ಲಿದ್ದು, ನೂತನವಾಗಿ ನಿರ್ಮಿಸಲಾಗುತ್ತಿರುವ ವೈದ್ಯಕೀಯ ಕಾಲೇಜಿನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕುಶಿನಗರವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿಸುವ ನಿಟ್ಟಿನಲ್ಲಿ ಪ್ರಧಾನಿಗಳ ಈ ಭೇಟಿ ನೆರವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಕುಶಿನಗರದಲ್ಲಿ ಮಹಾಪರಿನಿರ್ವಾಣ ಸ್ಥಳ ಎಂದೂ ಕರೆಯಲ್ಪಡುವ ಬುದ್ದನ ಮುಖ್ಯ ದೇವಾಲಯದ ಸುತ್ತಲೂ ಹಲವಾರು ಬೌದ್ಧ ದೇವಾಲಯಗಳು ಮತ್ತು ಅತಿಥಿ ಗೃಹಗಳನ್ನು ನಿರ್ಮಿಸಲಾಗಿದೆ.

ಬೌದ್ದ ಧರ್ಮದವರು ಹೆಚ್ಚಿನ ಸಂಖ್ಯೆಯಲ್ಲಿರು ಕುಶಿನಗರದಲ್ಲಿ ಉದ್ಘಾಟನೆಯಾಗುತ್ತಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನವು ಶ್ರೀಲಂಕಾದಿಂದ ಆಗಮಿಸುವ ಸಾಧ್ಯತೆಯಿದೆ. ಇತರ ಪ್ರತಿನಿಧಿಗಳು ಮತ್ತು ಬೌದ್ಧ ಯಾತ್ರಾರ್ಥಿಗಳನ್ನು ಹೊತ್ತೊಯ್ಯುವ ಸಾಧ್ಯತೆಯಿದೆ ಎಂದು ಪ್ರಧಾನಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

25ರಂದು ವಾರಣಾಸಿಗೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ, ಆರೋಗ್ಯ ಮೂಲಸೌಕರ್ಯಕ್ಕೆ ಸಂಬಂಧಿಸಿದ ಅಖಿಲ ಭಾರತ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.