Wednesday, 11th December 2024

ಉತ್ತರಾಖಂಡದ ಅಭಿವೃದ್ಧಿ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ: ಪ್ರಧಾನಿ ಮೋದಿ

ಅಲ್ಮೋರಾ: ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ವಿಧಾನಸಭೆ ಚುನಾವಣಾ ಪ್ರಚಾರವನ್ನುದ್ದೇಶಿಸಿ ಹೇಳಿದರು.

ಫೆ.14ರಂದು ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ವಿಧಾನಸಭಾ ಚುನಾವಣಾ ಸಮಾವೇಶದಲ್ಲಿ ಹೇಳಿದ ಅವರು, ರಾಜ್ಯದ ಗಡಿಗ್ರಾಮಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಬಿಜೆಪಿಯ ಆದ್ಯತೆಯಾಗಿದ್ದು, ಪರ್ವತಮಾಲಾ ಮತ್ತು ವೈಬ್ರೆಂಟ್ ವಿಲೇಜ್ ಯೋಜನೆಯಿಂದ ಜನರಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

ಉತ್ತರಾಖಂಡದ ಜಮ್ರಾಣಿ ಅಣೆಕಟ್ಟು ಯೋಜನೆ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಕುಮಾನ್ ಪ್ರದೇಶದಲ್ಲಿ ಮಾನಸಖಂಡ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಆದ್ಯತೆಯ ಮೇಲೆ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿ ದರು.

ಪ್ರಧಾನಿ ಮೋದಿ ಅವರು, “ಡಬಲ್ ಇಂಜಿನ್” ಸರ್ಕಾರಕ್ಕೆ ಮತ್ತೊಮ್ಮೆ ಮತ ಚಲಾಯಿಸುವ ಬಗ್ಗೆ ಉತ್ತರಾಖಂಡ ಜನರು ಮನಸ್ಸು ಮಾಡಿದ್ದಾರೆ ಎಂದು ಹೇಳಿದರು.

“ಗುರುವಾರ ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನದ ನಂತರ, ಬಿಜೆಪಿ ದಾಖಲೆಯ ಸಂಖ್ಯೆಯಲ್ಲಿ ಗೆಲುವು ಸಾಧಿಸುವುದು ಸ್ಪಷ್ಟವಾಗಿದೆ. ನಮಗಿಂತ ಹೆಚ್ಚು ಸಾರ್ವಜನಿಕರು ಈ ಚುನಾವಣೆಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಸಂಕಲ್ಪ ಮಾಡಿದ್ದಾರೆ. ಮತದಾರರು ಎಂದಿಗೂ ಒಳ್ಳೆಯ ಉದ್ದೇಶ ಹೊಂದಿರುವವರ ಪಕ್ಷವನ್ನು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶ ವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.