Saturday, 14th December 2024

ಉತ್ತರಾಖಂಡ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಕೋವಿಡ್‌ಗೆ ಬಲಿ

ನವದೆಹಲಿ: ಉತ್ತರಾಖಂಡದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಅವರು ಗುರುವಾರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

15 ದಿನಗಳ ಹಿಂದೆ ಸುರೇಂದ್ರ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಸುರೇಂದ್ರ ಸಿಂಗ್ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಸುರೇಂದ್ರ ಅವರು ಉತ್ತರಾಖಂಡ ರಾಜ್ಯದ ಅಲ್ಮೋರಾ ಜಿಲ್ಲೆಯ ಸಾಲ್ಟ್‌ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಕೆಳ ದಿನಗಳ ಹಿಂದಷ್ಟೆ ಇವರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದರು.