Saturday, 14th December 2024

ಉತ್ತರಾಖಂಡ್ ನೂತನ ಸಿಎಂ ಸಂಸದ ತೀರಥ್ ಸಿಂಗ್ ರಾವತ್ ಆಯ್ಕೆ

ಡೆಹ್ರಾಡೂನ್: ಸಂಸದ ತೀರಥ್ ಸಿಂಗ್ ರಾವತ್ ಅವರು ಉತ್ತರಾಖಂಡ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಬಳಿಕ ಬೆಳಗ್ಗೆ ನಡೆದ ಶಾಸಕಾಂಗ ಸಭೆಯಲ್ಲಿ ತೀರಥ್ ಸಿಂಗ್ ರಾವತ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಉತ್ತರಾಖಂಡ್ ಸಂಸದರೂ ಆಗಿರುವ ರಾವತ್ ಈ ಹಿಂದೆ ಶಾಸಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ಹೆಸರು ಕೊನೆಯ ಕ್ಷಣದವರೆಗೂ ಕೇಳಿಬಂದಿತ್ತು, ಅಂತಿಮವಾಗಿ ತೀರಥ್ ಸಿಂಗ್ ರಾವತ್ ಹೆಸರನ್ನು ಅಂತಿಮಗೊಳಿಸಲಾಗಿದೆ.