Friday, 22nd November 2024

ಉತ್ತರಾಖಂಡದಲ್ಲಿ 3.2 ತೀವ್ರತೆಯ ಭೂಕಂಪನ

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ.

ಇದರ ಕೇಂದ್ರ ಬಿಂದು 5 ಕಿ ಮಿ ಆಳದಲ್ಲಿ ಕೇಂದ್ರಿಕೃತವಾಗಿತ್ತು ಎಂದು ತಿಳಿದು ಬಂದಿದೆ. ರಿಕ್ಟರ್​ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಜಿಲ್ಲೆಯ ಪುರೋಲಾ, ಬರ್ಕೋಟ್, ನೌಗಾಂವ್, ಮೋರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಹಸೋರಿ ಗ್ರಾಮದಲ್ಲೂ ಭೂಕಂಪದ ಅನುಭವವಾಗಿದೆ. ರಾತ್ರಿ 8.57 ನಿಮಿಷಕ್ಕೆ 1.6 ತೀವ್ರತೆಯ ಭೂಕಂಪ ಸಂಭವಿ ಸಿದೆ ಎಂದು ವರದಿಯಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಭೂಕಂಪದ ಕೇಂದ್ರಬಿಂದುವು ಭೂಮಿಯ 7 ಕಿಮೀ ಆಳ ದಲ್ಲಿದೆ ಪತ್ತೆಯಾಗಿದೆ.

ದೆಹಲಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಭೂ ಕಂಪನ ಸಂಭವಿಸಿತ್ತು. ದೆಹಲಿ-ಎನ್‌ಸಿಆರ್‌, ಉತ್ತರ ಪ್ರದೇಶದ ನೋಯ್ಡಾದ ಜನರಿಗೆ ಕಂಪನದ ಅನುಭವವಾಗಿತ್ತು. ನೋಯ್ಡಾ ಸೆಕ್ಟರ್ 75ರ ಹಲವೆಡೆ ಕಂಪಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ನೇಪಾಳದಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ ರಾಷ್ಟ್ರ ರಾಜಧಾನಿಯಲ್ಲಿ ಇದರ ಅನುಭವವಾಗಿತ್ತು. ನೇಪಾಳದಲ್ಲಿ 5 ಕಿ.ಮೀ ಆಳದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿತ್ತು.

ಕೆಲದಿನಗಳ ಹಿಂದೆ ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ 5.1 ತೀವ್ರತೆಯ ಭೂಕಂಪನ ಸಂಭವಿಸಿತ್ತು. ರಾತ್ರಿ 11.01 ಗಂಟೆಯ ಸುಮಾರಿಗೆ ಕಂಪನದ ಅನುಭವವಾಗಿತ್ತು. 20 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿತ್ತು. ಭೂಮಿ ದಿಢೀರ್‌ ಕಂಪಿಸಿದ್ದರಿಂದ ಭಯಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದರು.