Sunday, 15th December 2024

ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ: ಉತ್ತರಾಖಂಡ ಸಚಿವ

ಡೆಹ್ರಾಡೂನ್: ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ. ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣಗಳು ಆಕಸ್ಮಿಕ ಎಂದು ಉತ್ತರಾಖಂಡ ಸಚಿವ ಗಣೇಶ್ ಜೋಶಿ ಹೇಳಿದ್ದಾರೆ.
ಇಂದಿರಾ ಗಾಂಧಿ ಹಾಗೂ ರಾಜೀವ್​ಗಾಂಧಿ ಹತ್ಯೆಯಾಗಿರುವುದನ್ನು ಹುತಾತ್ಮರಾಗಿದ್ದಾರೆ ಎನ್ನಲು ಸಾಧ್ಯವಿಲ್ಲ ಇದೊಂದು ಅಪಘಾತವಷ್ಟೇ ಎಂದಿದ್ದಾರೆ. ತ್ಯಾಗ ಕೇವಲ ಇಂದಿರಾ ಗಾಂಧಿ ಕುಟುಂಬಕ್ಕೆ ಸೇರಿದ್ದಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್, ಸಾವರ್ಕರ್, ಚಂದ್ರಶೇಖರ್ ಆಜಾದ್ ಮುಂತಾದವರು ಬಲಿದಾನ ಮಾಡಿದ್ದಾರೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಹತ್ಯೆ ತ್ಯಾಗವಲ್ಲ, ಅಪಘಾತ.

ತ್ಯಾಗಕ್ಕೂ ಅಪಘಾತಕ್ಕೂ ವ್ಯತ್ಯಾಸವಿದೆ ಎಂದಿದ್ದಾರೆ. ರಾಹುಲ್ ಗಾಂಧಿಯವರ ಬುದ್ಧಿ ವಂತಿಕೆ ಬಗ್ಗೆ ನನಗೆ ಅನುಕಂಪ ಇದೆ. ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯ ವಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್, ಸಾವರ್ಕರ್, ಚಂದ್ರಶೇಖರ್ ಆಜಾದ್ ಅವರಂಥ ಹಲವು ಮಂದಿ ಹುತಾತ್ಮರಾಗಿದ್ದಾರೆ.

ಗಾಂಧಿ ಕುಟುಂಬದ ಸದಸ್ಯರ ಹತ್ಯೆ ಆಕಸ್ಮಿಕಗಳು. ಇಂಥ ಆಕಸ್ಮಿಕ ಹಾಗೂ ಹುತಾತ್ಮತೆಗೆ ವ್ಯತ್ಯಾಸವಿದೆ” ಎಂದು ಜೋಶಿ ವಿವರಿಸಿ ದ್ದಾರೆ.

ಭಾರತ್ ಜೋಡೊ ಯಾತ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಸೂತ್ರವಾಗಿ ಮುಕ್ತಾಯಗೊಂಡಿದೆ ಎಂದಾದರೆ ಅದರ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು ಎಂದು ಕೃಷಿ, ರೈತಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತ ಸೈನಿಕ ಕಲ್ಯಾಣ ಖಾತೆ ಯ ರಾಜ್ಯಸಚಿವರಾದ ಜೋಶಿ ಬಣ್ಣಿಸಿದರು. ಕಾಶ್ಮೀರಕ್ಕೆ ಸಂಬಂಧಿಸಿದ 370 ನೇ ವಿಧಿಯನ್ನು ರದ್ದುಗೊಳಿಸದಿದ್ದರೆ, ಅಲ್ಲಿ ಸಹಜ ಸ್ಥಿತಿ ಮರಳುತ್ತಿರಲಿಲ್ಲ ಎಂದು ಹೇಳಿದರು.

ಶಾಂತಿಯುತ ವಾತಾವರಣದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಗಾಂಧಿ ಭೇಟಿ ನೀಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದರು.

Read E-Paper click here