Friday, 13th December 2024

ಡಿಕ್ಕಿ ಹೊಡೆದು ಮೂರು ಕಿಲೋಮೀಟರ್ ಎಳೆದೊಯ್ದ ಟ್ರಕ್: ಮಹಿಳೆ ಸಾವು

ಬಂದಾ(ಉತ್ತರ ಪ್ರದೇಶ): ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸಮೇತ ಮಹಿಳೆ ಯನ್ನು ಟ್ರಕ್‌ ಸುಮಾರು ಮೂರು ಕಿಲೋಮೀಟರ್ ವರೆಗೆ ಎಳೆದೊಯ್ದಿದೆ. ಇದರ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿ ದ್ದಾಳೆ.

ಮೃತಳನ್ನು ಪುಷ್ಪಾ ದೇವಿ ಎಂದು ಗುರುತಿಸಲಾಗಿದೆ. ಈಕೆ ವಿಶ್ವವಿದ್ಯಾಲಯವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪುಷ್ಪಾಳ ಸ್ಕೂಟಿಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಸ್ಕೂಟಿ ಟ್ರಕ್‌ಗೆ ಸಿಲುಕಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಆಕೆ ಅಲ್ಲೇ ಮೃತಪಟ್ಟಿದ್ದಾಳೆ.

ಘಟನಾ ಸ್ಥಳಕ್ಕೆ ಪೊಲೀಸ್ ಪಡೆಗಳು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದು, ತನಿಖೆ ಮುಂದುವರೆದಿದೆ.