Saturday, 14th December 2024

ಲಿಂಗ ಬದಲಾವಣೆಗೆ ಅನುಮತಿ ಕೋರಿ ಡಿಜಿಪಿಗೆ ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಪತ್ರ

ಖನೌ: ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಗಳು ಲಿಂಗ ಬದಲಾವಣೆಗೆ ಅನುಮತಿ ಕೋರಿ ಡಿಜಿಪಿಗೆ ಪತ್ರ ಬರೆದಿದ್ದು, ಇದು  ಳವಣಿಗೆ ಪೊಲೀಸ್ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಉತ್ತರ ಪ್ರದೇಶದ ಗೋರಕ್ ಪುರ ಹಾಗೂ ಗೋಂಡಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಗಳು ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಯುಪಿ ಪೊಲೀಸರು ಇಂಥದ್ದೊಂದು ವಿಶೇಷ ಮನವಿ ಸ್ವೀಕರಿಸಿರುವುದು ಇದೇ ಮೊದಲು. ಲಿಂಗ ಬದಲಾವಣೆಗೆ ಅನುಮತಿ ನೀಡುವುದು ಹೇಗೆ ಎಂಬುದೇ ಪೊಲೀಸ್ ಅಧಿಕಾರಿಗಳ ಮುಂದಿರುವ ಪ್ರಶ್ನೆಯಾಗಿದೆ.

ಯುಪಿ ಪೊಲೀಸ್ ಇಲಾಖೆ ಹೆಚ್ಚುವರಿ ಡೈರೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿ ಪ್ರತಿಕ್ರಿಯಿಸಿ, ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಗಳು ಲಿಂಗ ಬದಲಾವಣೆಗೆ ಅನುಮತಿ ಕೋರಿದ್ದಾರೆ.

ಇಬ್ಬರೂ ವಿಭಿನ್ನ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಲಿಂಗ ಪರಿವರ್ತನೆಗೆ ಅನುಮತಿ ನೀಡಲು ಹಲವು ಸಮಸ್ಯೆಗಳಿವೆ. ಮಹಿಳಾ ಕಾನ್ಸ್ ಟೇಬಲ್ ಗಳು ಶಸ್ತ್ರಚಿಕಿತ್ಸೆ ಬಳಿಕ ಪುರುಷ ಕಾನ್ಸ್ ಟೇಬಲ್ ಗಳು ಎಂದು ಪರಿಗಣಿಸಿದರೆ ಅವರಿಗೆ ಅಗತ್ಯವಿರುವ ದೈಹಿಕ ಮಾನದಂಡಗಳನ್ನು ಪರಿಗಣಿಸುವುದು ಹೇಗೆ? ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಎತ್ತರ, ಓಡುವ ಸಾಮರ್ಥ್ಯ ಹಾಗೂ ಭುಜ ಬಲದಂತಹ ಹಲವು ದೈಹಿಕ ಮಾನದಂಡಗಳಿವೆ. ಪುರುಷ ಹಾಗೂ ಮಹಿಳೆಯರ ನೇಮಕಾತಿ ವೇಳೆ ಪೊಲೀಸ್ ಇಲಾಖೆ ಯಲ್ಲಿ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ. ಮಹಿಳಾ ಮಾನದಂಡಗಳ ಅಡಿಯಲ್ಲಿ ಉದ್ಯೋಗ ಪಡೆದ ನತರ ಲಿಂಗ ಬದಲಾಯಿಸುವ ಮಹಿಳಾ ಸಿಬ್ಬಂದಿಯು ಮಾನದಂಡ ಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಈ ವರ್ಷದ ಜನವರಿಯಿಂದ ಈ ಪ್ರಕರಣ ನಡೆಯುತ್ತಿದೆ.