ಲಖನೌ: ಇದೇ ಮಾ.24ರಂದು ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ನಡೆಯುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ನಿಯೋಜಿತ ಯೋಗಿ ಆದಿತ್ಯನಾಥ ಅವರನ್ನು ಅಧಿಕೃತವಾಗಿ ಮುಖ್ಯ ಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಲು ವಾಗಿ ಸಭೆ ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸಭೆಯ ದಿನಾಂಕವನ್ನು ಇನ್ನಷ್ಟೇ ನಿರ್ಧರಿಸಬೇಕಿದೆ.
ಮಾ.21ರಂದು ಬಿಜೆಪಿ ಶಾಸಕರ ಸಭೆ ನಿಗದಿ ಆಗಿತ್ತು. ಆದರೆ ಅದನ್ನು ಮುಂದೂಡ ಲಾಯಿತು ಎಂದು ಹೇಳಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವೀಕ್ಷಕರನ್ನಾಗಿ ಮತ್ತು ಜಾರ್ಖಂಡ್ ಮುಖ್ಯ ಮಂತ್ರಿ ರಘುಬರ್ ದಾಸ್ ಅವರನ್ನು ಉಪ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ.
ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಗೋವಾದಲ್ಲಿ ಹೊಸ ಸರ್ಕಾರ ರಚನೆಯ ಕಸರತ್ತುಗಳು ನಡೆಯುತ್ತಿದ್ದು, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ಹಿರಿಯ ಮುಖಂಡರಾದ ಅಮಿತ್ ಶಾ, ರಾಜನಾಥ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.