ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳು ಮತ್ತು ದೇಶದ ಜನರಿಗೆ ಶುಭಾಶಯಗಳನ್ನು ತಿಳಿಸಿ ದ್ದಾರೆ.
ಟ್ವಿಟರ್ ಟ್ವೀಟ್ ಮಾಡಿರುವ ಮನ್ಸುಖ್ ಮಾಂಡವಿಯಾ ಅವರು, “ಇಂದು ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನ ಒಂದು ವರ್ಷವನ್ನು ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಎಲ್ಲರ ಪ್ರಯತ್ನದಿಂದ ಈ ಅಭಿಯಾನ ಪ್ರಾರಂಭವಾಗಿತ್ತು, ಇಂದು ಇದು ವಿಶ್ವದ ಅತ್ಯಂತ ಯಶಸ್ವಿ ಲಸಿಕೆ ಅಭಿಯಾನ ವಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳು ಹಾಗೂ ದೇಶದನ ಜನತೆಗೆ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ.
ಭಾರತದಲ್ಲಿ ಜ.16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,56,76,15,454 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.