Sunday, 19th May 2024

100 ಕೋಟಿ ಜನರಿಗೆ ಕರೋನಾ ಲಸಿಕೆ, ಹೊಸ ಮೈಲಿಗಲ್ಲು: ಪ್ರಹ್ಲಾದ್ ಜೋಷಿ

Pralhad Joshi

ನವದೆಹಲಿ: ಒಂಬತ್ತು ತಿಂಗಳಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪದೊಂದಿಗೆ ಭಾರತದಲ್ಲಿ 100 ಕೋಟಿಗೂ ಅಧಿಕ ಜನರಿಗೆ ಕರೋನಾ ಲಸಿಕೆ ನೀಡಿರುವುದು ಜಗತ್ತಿನಲ್ಲೇ ಹೊಸ ಮೈಲಿಗಲ್ಲು ಸಾಧಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಈ ಕಾರ್ಯದಲ್ಲಿ ಶ್ರಮಿಸಿದ ಎಲ್ಲಾ ವೈದ್ಯಕೀಯ ಸಿಬ್ಬಂದಿಗಳಿಗೆ, ಕರೊನಾ ವಾರಿಯರ್ಸ್‍ಗಳಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲಸಿಕೆ ಅಭಿಯಾನವನ್ನು ಯಶಸ್ವಿಯಾಗಿರುವುದು ಹೆಮ್ಮೆ ತಂದಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!