ಘಟನೆಯಿಂದಾಗಿ ರೈಲ್ವಿನ ಮುಂಭಾಗದ ಪ್ಯಾನಲ್ ಗೆ ಹಾನಿಯಾಗಿದೆ. ಮೊದಲ ಬೋಗಿಯ ಉಪಕರಣಗಳು ಮುರಿದಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಇದು ಈ ತಿಂಗಳಲ್ಲಿ ಸಂಭವಿಸಿದ ಮೂರನೇ ಪ್ರಕರಣವಾಗಿದೆ. ಅಟಲ್ ರೈಲ್ವೆ ನಿಲ್ದಾಣದ ಬಳಿಕ ಜಾನುವಾರ ಹಳಿ ಮೇಲೆ ಬಂದಾಗ ರೈಲು ಡಿಕ್ಕಿ ಹೊಡೆದಿದೆ.
ಅಕ್ಟೋಬರ್ 6 ರಂದು ಇದೇ ಮಾರ್ಗದಲ್ಲಿ ಈ ರೈಲು ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಮೃತಪಟ್ಟಿದ್ದವು. ಅಕ್ಟೋಬರ್ 7 ರಂದು ಗುಜರಾತ್ ನ ಆನಂದ್ ಬಳಿ ಹಸುವೊಂದಕ್ಕೆ ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದಿತ್ತು.