Thursday, 19th September 2024

ಸಿಕಂದರಾಬಾದ್-ವಿಶಾಖಪಟ್ಟಣಂ ನಡುವಿನ ವಂದೇ ಭಾರತ್ ರೈಲು ಸೇವೆಗೆ ಚಾಲನೆ

ವಿಶಾಖಪಟ್ಟಣಂ: ತೆಲಂಗಾಣದ ಸಿಕಂದರಾಬಾದ್ ಮತ್ತು ಆಂಧ್ರಪ್ರದೇಶದ ಬಂದರು ನಗರವಾದ ವಿಶಾಖಪಟ್ಟಣಂ ನಡುವಿನ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಚುವಲ್ ಆಗಿ ಚಾಲನೆ ನೀಡಿದರು.

ಎರಡು ತೆಲುಗು ರಾಜ್ಯಗಳ ನಡುವೆ ಕಾರ್ಯನಿರ್ವಹಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವೆ ಎಂಟು ಗಂಟೆ 30 ನಿಮಿಷಗಳಲ್ಲಿ ಚಲಿಸುತ್ತದೆ.

ವಂದೇ ಭಾರತ್ ತೆಲಂಗಾಣ ಮತ್ತು ಆಂಧ್ರಪ್ರದೇಶದ ಸಂಸ್ಕೃತಿಗಳನ್ನು ಸಂಪರ್ಕಿಸುತ್ತದೆ.

ರೈಲಿನ ನಿಯಮಿತ ಸೇವೆಗಳು ಜನವರಿ 16 ರಿಂದ ಪ್ರಾರಂಭವಾಗಲಿದ್ದು, ಬುಕಿಂಗ್ ಶನಿವಾರ ಪ್ರಾರಂಭವಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ವಿಶಾಖಪಟ್ಟಣಂ ಸಿಕಂದರಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್ (20833) ಬೆಳಗ್ಗೆ 05.45 ಕ್ಕೆ ಪ್ರಾರಂಭವಾಗಿ ಸಿಕಂದರಾಬಾದ್‌ಗೆ ಮಧ್ಯಾಹ್ನ 2.15 ಕ್ಕೆ ತಲುಪುತ್ತದೆ.

ಇದು ಸಿಕಂದರಾಬಾದ್‌ನಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ರಾತ್ರಿ 11.30 ಕ್ಕೆ ವಿಶಾಖಪಟ್ಟಣಂ ತಲುಪಲಿದೆ.