Saturday, 14th December 2024

ಕೇರಳದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತ ಪುರಕ್ಕೆ ತೆರಳುತ್ತಿತ್ತು.

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾ ಗಿದೆ. ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು.

ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟ ನಡೆದ ಮೂರನೇ ಘಟನೆ ಇದಾಗಿದೆ. ಈ ಹಿಂದೆ ಏಪ್ರಿಲ್ 6 ರಂದು ವಿಶಾಖಪಟ್ಟಣ ದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಮಾರ್ಚ್ 12 ರಂದು ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು.