Sunday, 15th December 2024

5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಚಾಲನೆ

ವದೆಹಲಿ : ಬೆಂಗಳೂರು -ಧಾರವಾಡ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸೇರಿದಂತೆ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ಏಕಕಾಲದಲ್ಲಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಚಾಲನೆ ಸಿಕ್ಕಿದೆ.

ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ವರ್ಚುವಲ್ ಮೂಲಕ ಐದು ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.

ಧಾರವಾಡ -ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಬೆಳಗ್ಗೆ ಧಾರವಾಡದಿಂದ ಹೊರಟು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ದಾವಣಗೆರೆಗೆ ಆಗಮಿಸಲಿದೆ. ದಾವಣ ಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಭೋಪಾಲ್ -ಇಂದೋರ್, ಭೋಪಾಲ್ -ಜಬಲ್ಪುರ, ರಾಂಚಿ -ಪಾಟ್ನಾ, ಮಡಗಾಂವ್ – ಮುಂಬೈ ಮಾರ್ಗದ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಮೋದಿ ಚಾಲನೆ ನೀಡಿ ದ್ದಾರೆ. ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​​​​, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.