ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿ ಗಳು ಕೋರ್ಟ್‍ಗೆ ವರದಿ ನೀಡಿದ್ದರು.
ವಾದ-ವಿವಾದ- ಪ್ರತಿವಾದಗಳ ನಡುವೆಯೇ ತಮಗೆ ಪೂಜೆಗೆ ಅವಕಾಶ ನೀಡುವಂತೆ ಕೋರಿ ಮಹಿಳೆಯರು ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಮೂರು ತಿಂಗಳಿಗೂ ಹೆಚ್ಚು ಕಾಲ ವಾದ-ಪ್ರತಿವಾದ ನಡೆದಿತ್ತು.
ತೀರ್ಪಿಗೂ ಮುನ್ನ ಕೋರ್ಟ್ ಆವರಣದಲ್ಲಿ ಜಮಾಯಿಸಿದ್ದ ಹಿಂದೂ ಭಕ್ತರು ಪೂಜೆ ಸಲ್ಲಿಸಿದ ಘಟನೆ ಕೂಡ ನಡೆದಿದೆ. ಅರ್ಜಿದಾರ ಮಹಿಳೆಯರಿಗೆ ಶಾಲು ಹಾಕಿ ಸನ್ಮಾನ ಕೂಡ ಮಾಡಲಾಯಿತು.