Friday, 1st December 2023

ಹಗಲಿನಲ್ಲಿ ಜನ ಸೇರುತ್ತಾರೆ, ರಾತ್ರಿಯಲ್ಲಿ ಕರ್ಫ್ಯೂ ಹೇರುತ್ತಾರೆ: ವರುಣ್ ಗಾಂಧಿ ಟೀಕೆ

Varun Gandhi

ನವದೆಹಲಿ: ಕೋವಿಡ್‌ ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಜಾರಿ ಮಾಡಿರುವ ಹಲವು ರಾಜ್ಯಗಳ ನಿರ್ಧಾರವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಟೀಕಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಶಕ್ತಿ ಪ್ರದರ್ಶನ ಮಾಡಲು ಜನರನ್ನು ಸೇರಿಸುವ ಬದಲು, ಅವರು ಮನೆಯಲ್ಲಿಯೇ ಇರಲು ಪ್ರೇರೇಪಿಸಬೇಕು ಎಂದವರು ಕಿವಿಮಾತು ಹೇಳಿದ್ದಾರೆ.

ಸೋಂಕನ್ನು ತಡೆಗಟ್ಟುವುದು ನಮ್ಮ ಆದ್ಯತೆಯೇ ಅಥವಾ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದು ನಮಗೆ ಮುಖ್ಯವೇ ಎಂಬುದನ್ನು ನಿರ್ಧರಿಸಬೇಕಾಗಿದೆ.

ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಟ್ಟುಗೂಡಿಸುತ್ತಾರೆ. ನಂತರ ರಾತ್ರಿಯಲ್ಲಿ ಕರ್ಫ್ಯೂ ಹೇರುತ್ತಾರೆ. ಇದೇನು ಎಂದು ಸಾಮಾನ್ಯ ಜನರಿಗೆ ಅರ್ಥವಾಗುತ್ತಿಲ್ಲ ಎಂದು ಅವರು ಸರ್ಕಾರಗಳನ್ನು ಟೀಕಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ದೌಡಾಯಿಸಿದ್ದು, ಜನ ವಿಶ್ವಾಸ ಯಾತ್ರೆ ಸೇರಿದಂತೆ ಹಲವು ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸಿದ್ದಾರೆ.

error: Content is protected !!