Wednesday, 11th December 2024

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದ ವೀರಪ್ಪನ್ ಪುತ್ರಿ

ಚೆನ್ನೈ: ಕಾಡುಗಳ್ಳ, ದಂತಚೋರ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ರೆಡಿಯಾಗಿದ್ದಾರೆ.
ವೀರಪ್ಪನ್ ಅವರ ಪುತ್ರಿ ವಿದ್ಯಾರಾಣಿ ಏಪ್ರಿಲ್ 19 ರ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷ ನಾಮ್ ತಮಿಳರ್ ಕಚ್ಚಿ‌ (ಎನ್‌ ಟಿ ಕೆ) ಪಕ್ಷದ ಅಭ್ಯರ್ಥಿಯಾಗಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ವೃತ್ತಿಯಲ್ಲಿ ವಕೀಲರಾದ ವಿದ್ಯಾರಾಣಿ ಅವರು ಜುಲೈ 2020 ರಲ್ಲಿ ಬಿಜೆಪಿಗೆ ಸೇರಿದರು ಮತ್ತು ಅದರ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡರು. ಆದರೆ ಇತ್ತೀಚೆಗೆ ಬಿಜೆಪಿ ಪಕ್ಷವನ್ನು ಎನ್‌ಟಿಕೆಗೆ ಸೇರಿದ್ದಾರೆ.
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಲ್ಲಾ 40 ಅಭ್ಯರ್ಥಿಗಳನ್ನು ಪರಿಚಯಿಸುವ ಮೂಲಕ ಚೆನ್ನೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ “ವಿದ್ಯಾ ರಾಣಿ ಕೃಷ್ಣಗಿರಿಯಿಂದ ಎನ್‌ಟಿಕೆ ಅಭ್ಯರ್ಥಿಯಾಗಲಿದ್ದಾರೆ” ಎಂದು ಘೋಷಿಸಿದರು.
ಅಕ್ಟೋಬರ್ 18, 2004 ರಂದು ತಮಿಳುನಾಡು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ವೀರಪ್ಪನ್, ಆನೆಗಳನ್ನು ಬೇಟೆಯಾಡುವುದು, ಶ್ರೀಗಂಧದ ಮರವನ್ನು ಕಳ್ಳಸಾಗಣೆ ಮಾಡುವುದು, ಕನ್ನಡ ಹಿರಿಯ ನಟ ರಾಜ್ ಕುಮಾರ್ ಮತ್ತು ಮಾಜಿ ಸಚಿವ ನಾಗಪ್ಪ ಅವರಂತಹ ಉನ್ನತ ವ್ಯಕ್ತಿಗಳನ್ನು ಅಪಹರಿಸುವ ಮೂಲಕ ಕುಖ್ಯಾತಿ ಗಳಿಸಿದ್ದರು.