Saturday, 14th December 2024

ಕರೋನಾ ಎರಡನೇ ಡೋಸ್ ಲಸಿಕೆ ಪಡೆದುಕೊಂಡ ವೆಂಕಯ್ಯ ನಾಯ್ಡು

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾನುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕರೋನಾ ಎರಡನೇ ಡೋಸ್ ಲಸಿಕೆ ಪಡೆದುಕೊಂಡರು.

2020ರ ಸೆಪ್ಟೆಂಬರ್‌ ತಿಂಗಳಲ್ಲಿ ಕರೊನಾ ಸೋಂಕಿಗೀಡಾಗಿದ್ದರು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮಾರ್ಚ್ 1ರಂದು ಚೆನ್ನೈನಲ್ಲಿ ಮೊದಲ ಲಸಿಕೆ ಡೋಸ್ ಪಡೆದುಕೊಂಡಿದ್ದರು. ಇದೀಗ ದೆಹಲಿಯ ಏಮ್ಸ್ ನಲ್ಲಿ 2ನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ವೆಂಕಯ್ಯ ನಾಯ್ಡು ಅವರು, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 7,59,79,651 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily