ಪಣಜಿ: ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್(‘ತೆಹೆಲ್ಕಾ’) ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪನ್ನು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ.
2013ರಲ್ಲಿ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿರುವ ದೂರು ತೇಜ್‌ಪಾಲ್ ವಿರುದ್ಧ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಕಳೆದ ಮಾರ್ಚ್‌ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಏಪ್ರಿಲ್ 27ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿತ್ತು. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕ್ಷಮಾ ಜೋಶಿ ಅವರು ತೀರ್ಪು ನೀಡುವರು.
ತೆಹಲ್ಕಾದ ಸಂಸ್ಥಾಪಕ -ಸಂಪಾದಕ ತರುಣ್ ತೇಜ್‌ಪಾಲ್ 2013ರಲ್ಲಿ ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಅದೇ ಸಂಸ್ಥೆಯ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು.