Saturday, 14th December 2024

ಡಿ.20 ರಿಂದ ಧಾರ್ಮಿಕ ಮತಾಂತರದ ವಿರುದ್ಧ ಅಭಿಯಾನ: ವಿಎಚ್‌ಪಿ

VHP

ಕೋಲ್ಕತಾ: ಡಿ.20 ರಿಂದ 31 ರವರೆಗೆ ದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಅಭಿಯಾನ ಪ್ರಾರಂಭಿಸಲಿದ್ದೇವೆ ಎಂದು ವಿಎಚ್‌ಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಿಯಾನ್ ಸಿದ್ ಹೇಳಿದ್ದಾರೆ.

ಬಲವಂತದ ಅಂತರ್ಧರ್ಮೀಯ ವಿವಾಹಗಳ ವಿರುದ್ಧ ಕಾನೂನು ಮತ್ತು ಇತರ ಧರ್ಮಗಳಿಗೆ ಮತಾಂತರಗೊಳ್ಳುವ ದಲಿತರು ಮತ್ತು ಹಿಂದೂ ಬುಡಕಟ್ಟು ಜನಾಂಗದವರಿಗೆ ನೀಡಬೇಕಾದ ಸೌಲಭ್ಯಗಳನ್ನು ಮೊಟಕು ಗೊಳಿಸುವಂತೆ ಒತ್ತಾಯಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ದೊಡ್ಡ ಪ್ರಮಾಣದ ಮತಾಂತರ ನಡೆದಿದೆ ಎಂದು ಹೇಳಿದ್ದಾರೆ.

ಮುಸ್ಲಿಂ ಮತ್ತು ಕ್ರಿಶ್ಚಿಯನ್ ಬೋಧಕರ ಬಲವಂತದ ಮತಾಂತರವನ್ನು ನಿಲ್ಲಿಸಲು ನಾವು ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.