Sunday, 6th October 2024

ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ವಜಾ

ಚಂಡೀಗಢ: ದೃಢ ಸಾಕ್ಷ್ಯಾಧಾರಗಳು ದೊರೆತ ನಂತರ ಭ್ರಷ್ಟಾಚಾರ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ರನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ಸಂಪುಟದಿಂದ ವಜಾ ಗೊಳಿಸಿದ್ದಾರೆ.

ಸಿಂಗ್ಲಾ ಅಧಿಕಾರಿಗಳಿಂದ ಗುತ್ತಿಗೆಗಳಲ್ಲಿ ಕಮಿಷನ್‌ಗೆ ಬೇಡಿಕೆಯಿಡುತ್ತಿದ್ದರು ಎನ್ನಲಾಗಿದೆ. ಸಿಂಗ್ಲಾ ಅಧಿಕಾರಿಗಳಿಂದ ಗುತ್ತಿಗೆ ಗಳಲ್ಲಿ ಒಂದು ಶೇಕಡಾ ಕಮಿಷನ್‌ಗೆ ಬೇಡಿಕೆಯಿಡುತ್ತಿದ್ದರು ಎನ್ನಲಾಗಿದೆ. ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟಾಚಾರ ವಿರೋಧಿ ಮಾದರಿಗೆ ಅನುಗುಣವಾಗಿ ಇಂತಹ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

ತಮ್ಮ ಪಕ್ಷಕ್ಕೆ ಮಾತ್ರ ತಮ್ಮ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಾಮಾಣಿಕತೆ ಮತ್ತು ಧೈರ್ಯವಿದೆ ಎಂದು ಆಪ್ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.