Tuesday, 10th December 2024

ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಸ್ಥಾಪನೆ

ಚೆನ್ನೈ: ತಮಿಳು ನಟ ದಳಪತಿ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

ದಳಪತಿ ವಿಜಯ್ ಗುರುವಾರ ತಮ್ಮ ರಾಜಕೀಯ ಪಕ್ಷದ ಬಾವುಟ ಹಾಗೂ ಚಿಹ್ನೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ವಿಜಯ್ ಅವರ ಪಕ್ಷವು 2026ರ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಮಾಡಿದ್ದಾರೆ.

ಧ್ವಜ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, ‘ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ, ತಮಿಳುನಾಡಿನ ಮಣ್ಣಿನಿಂದ ನಮ್ಮ ಜನರ ಹಕ್ಕುಗಳಿಗಾಗಿ ಶೌರ್ಯದಿಂದ ಹೋರಾಡಿ ತಮ್ಮ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ತ್ಯಾಗವನ್ನು ನಾನು ಯಾವಾಗಲೂ ಸ್ಮರಿಸುತ್ತೇನೆ. ತಮಿಳು ಭಾಷೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಹುತಾತ್ಮರನ್ನು ಸ್ಮರಣೆ ಮಾಡುತ್ತಾ ಅವರ ದಾರಿಯಲ್ಲಿ ನಡೆಯುತ್ತೇನೆ ಭಾರತ ಸಂವಿಧಾನ ಮತ್ತು ಭಾರತ ಸಾರ್ವಭೌಮತ್ವದ ಮೇಲೆ ನನಗೆ ಸಂಪೂರ್ಣ ನನಗೆ ನಂಬಿಕೆ ಎಂದು ಹೇಳಿದರು.

ರಾಜಕೀಯ ಪಕ್ಷ ಪ್ರಾರಂಭಿಸುವುದಾಗಿ ಮೊದಲೇ ಘೋಷಿಸಿದ್ದರು: 2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದರೊಂದಿಗೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಹೇಳಿದ್ದರು. ಈ ವರ್ಷ ನಡೆದ ಲೋಕಸಭೆ ಚುನಾವಣೆ ಯಲ್ಲಿ ದಳಪತಿ ವಿಜಯ್ ಯಾವುದೇ ಮೈತ್ರಿ ಅಥವಾ ಪಕ್ಷವನ್ನು ಬೆಂಬಲಿಸಲಿಲ್ಲ.