ಲಖನೌ: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಯುವತಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು, ಕೆಳಗೆ ಬಿದ್ದ ಆಕೆಯ ಕತ್ತು ಹಿಸುಕಲು ಪ್ರಯತ್ನಿಸಿದ ಘಟನೆ ನಡೆದಿದೆ. ಜನರು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿ ವ್ಯಕ್ತಿಯನ್ನು ತಡೆದಿದ್ದಕ್ಕೆ ಯುವತಿಯ ಜೀವ ಉಳಿದಿದೆ ಎನ್ನಲಾಗಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.
ಅಮ್ರೋಹಾದ ಸೇಲಂಪುರ್ ಗೋಸಾಯಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಯುವತಿ ಆತನ ಪ್ರೀತಿಯನ್ನು ತಿರಸ್ಕರಿಸಿದ ನಂತರ ಆಕೆಯನ್ನು ಕೊಲ್ಲಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸ್ ವರದಿಗಳ ಪ್ರಕಾರ, ಆರೋಪಿಯು ಮೊದಲು ಸಂತ್ರಸ್ತೆಯನ್ನು ಸ್ಕೂಟರ್‌ನಿಂದ ಕೆಳಗೆ ತಳ್ಳಿ ನಂತರ ಅವಳ ದುಪಟ್ಟಾದಿಂದ ಕತ್ತು ಹಿಸುಕಲು ಪ್ರಯತ್ನಿಸಿದ್ದಾನೆ. ಈ ಭಯಾನಕ ಘಟನೆಯನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
उत्तर प्रदेश : जिला अमरोहा में प्रेमिका को सड़क पर गिराकर गला घोंटकर हत्या की कोशिश, पब्लिक ने बचाया !!
— Gagandeep Singh (@GagandeepNews) January 5, 2025
सिरफिरे बॉयफ्रेंड राहुल पर FIR दर्ज, तलाश जारी। pic.twitter.com/7xaJtAikX5
ವರದಿ ಪ್ರಕಾರ, ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಜಿಎನ್ಎಂ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಶನಿವಾರ ಸಂಜೆ ತನ್ನ ಗ್ರಾಮದಿಂದ ಗಜ್ರೌಲಾಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿ ಕಳೆದ ನಾಲ್ಕು ವರ್ಷಗಳಿಂದ ಯುವತಿಯನ್ನು ಹಿಂಬಾಲಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಯುವತಿ ಇತರ ಪುರುಷರೊಂದಿಗೆ ಮಾತನಾಡುವುದನ್ನು ನೋಡಿದ ನಂತರ ಆರೋಪಿ ಕೋಪಗೊಂಡಿದ್ದಾನೆ ಎಂದು ವರದಿಯಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿ ಸಂತ್ರಸ್ತೆಯ ಸ್ಕೂಟರ್ ಅನ್ನು ತಡೆದು ಶುರುವಿನಲ್ಲಿ ಯುವತಿಯ ಜೊತೆ ಮಾತುಕತೆ ನಡೆಸಿದ್ದಾನಂತೆ. ನಂತರ ಅವನು ಇದ್ದಕ್ಕಿದ್ದಂತೆ ಯುವತಿಯ ಮೇಲೆ ದಾಳಿ ಮಾಡಿ ಆಕೆಯ ದುಪಟ್ಟಾದಿಂದ ಅವಳ ಕತ್ತು ಹಿಸುಕಲು ಪ್ರಯತ್ನಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿದೆ. ಸ್ಥಳೀಯ ನಿವಾಸಿಗಳು ಮಧ್ಯಪ್ರವೇಶಿಸಿ ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಆದರೆ ಈ ನಡುವೆ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಸುದ್ದಿಯನ್ನೂ ಓದಿ:ವಯಸ್ಸು ನಂಬರ್ ಅಷ್ಟೇ; ‘ದಬಾಂಗ್’ನ ‘ದಗಾಬಾಜ್ ರೇ’ ಹಾಡಿಗೆ ಸಖತ್ ಆಗಿ ಹೆಜ್ಜೆ ಹಾಕಿದ ‘ಡ್ಯಾನ್ಸಿಂಗ್ ದಾದಿ’
ಸಂತ್ರಸ್ತೆಯ ಕುಟುಂಬವು ಅವಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದು, ಅಧಿಕಾರಿಗಳು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. “ನಾವು ಪ್ರಕರಣ ದಾಖಲಿಸಿದ್ದೇವೆ ಮತ್ತು ಆರೋಪಿಯನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.